ದಾವಣಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಹೊನ್ನಾಳಿ ತಾಲೂಕಿನ ಸವಳಂಗ ವಲಯದ ಸರ್ಕಾರಿ ಪ್ರೌಢಶಾಲೆ ಚಟ್ನಳ್ಳಿಯಲ್ಲಿ ನಡೆದ ಟ್ಯೂಷನ್ ಕ್ಲಾಸ್‌ನ ಸಮಾರೋಪ ಕಾರ್ಯಕ್ರಮ ಗುರುವಾರ ನೆರವೇರಿತು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಸಹಕಾರ ನೀಡುವ ನಿಟ್ಟಿನಲ್ಲಿ ಜ್ಞಾನದೀಪ ಶಿಕ್ಷಕರನ್ನು ನಿಯೋಜನೆ ಮಾಡುತ್ತಿದ್ದಾರೆ. ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ನೀಡುತ್ತಿದ್ದಾರೆ. ಇದರೊಂದಿಗೆ ಗ್ರಾಮೀಣ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಯೋಜನೆಯ ಮೂಲಕ 3 ತಿಂಗಳು ಟ್ಯೂಷನ್ ಕ್ಲಾಸ್‌ಗಳನ್ನು ನಡೆಸುತ್ತಿದ್ದಾರೆ ಮಕ್ಕಳಿಗೆ ಇದರಿಂದ ಹೆಚ್ಚಿನ ಅಂಕ ಗಳಿಸಲು ಸಹಾಯವಾಗುತ್ತದೆ ಎಂದು ಜಿಲ್ಲಾ ಜನಜಾಗೃತಿ ಸದಸ್ಯ ಲಿಂಗರಾಜ್ ಹವಳದ್ ಅಭಿಪ್ರಾಯ ವ್ಯಕ್ತಪಡಿಸಿದರು.
PublicNext
13/03/2026 08:40 pm