ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ತಡೆದು ತೀವ್ರ ಪ್ರತಿಭಟನೆ ನಡೆಸಲಾಗಿದ್ದು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (CCF) ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಲಾಯಿತು. ನಗರದ ಹೊರವಲಯದಲ್ಲಿರುವ ಅರಣ್ಯ ಭವನದ ಎದುರು ಈ ಪ್ರತಿಭಟನೆ ನಡೆಯಿತು.
ಹೆದ್ದಾರಿ ತಡೆದು ಬಿಜೆಪಿ ಪ್ರತಿಭಟನೆ
ಈ ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿ, ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಪ್ರತಿಭಟನೆ ತೀವ್ರ ಸ್ವರೂಪ: ಅರಣ್ಯ ಭವನಕ್ಕೆ ನುಗ್ಗಲು ಯತ್ನ
ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿತು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಎರಡನೇ ಬಾರಿಗೆ ಅರಣ್ಯ ಭವನದೊಳಗೆ ನುಗ್ಗಲು ಯತ್ನಿಸಿದರು. ಆದರೆ, ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಒಳನುಗ್ಗುವುದನ್ನು ವಿಫಲಗೊಳಿಸಿದರು. ಈ ವೇಳೆ ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
PublicNext
13/03/2026 11:00 pm
LOADING...