ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ವಿಶೇಷ ಆಸಕ್ತಿಯಿಂದ ಧಾರವಾಡದಲ್ಲಿ ನಿರ್ಮಾಣವಾಗಿರುವ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣ ಹಾಗೂ ಈಜುಕೊಳ ಶನಿವಾರ ಉದ್ಘಾಟನೆಗೊಳ್ಳಲಿದೆ.
ಸ್ವರ್ಣಾ ಗ್ರೂಪ್ ಆಫ್ ಕಂಪೆನಿಯು ಈ ಕ್ರೀಡಾ ಸಂಕೀರ್ಣವನ್ನು ವಿನ್ಯಾಸಗೊಳಿಸಿ ಕಟ್ಟಡ ಕಾಮಗಾರಿ ನಡೆಸಿದ್ದು, ಸ್ವರ್ಣಾ ಗ್ರೂಪ್ ಆಫ್ ಕಂಪೆನಿಯ ಎಂಡಿ ಡಾ.ಸಿ.ಎಚ್.ವಿಎಸ್‌ವಿ ಪ್ರಸಾದ್ ಅವರು ಕ್ರೀಡಾ ಸಂಕೀರ್ಣಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದರು.
ಶನಿವಾರ ಕೇಂದ್ರ ಕ್ರೀಡಾ ಸಚಿವ ಡಾ.ಮನ್ಸುಖ್ ಮಾಂಡವೀಯಾ ಹಾಗೂ ಪ್ರಹ್ಲಾದ ಜೋಶಿ ಅವರು ಈ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿ ಹೈಟೆಕ್ ಸೌಲಭ್ಯಗಳನ್ನೊಳಗೊಂಡು ಈ ಕ್ರೀಡಾ ಸಂಕೀರ್ಣ ನಿರ್ಮಾಣಗೊಂಡಿದೆ.
ನಾಳೆ ಈ ಕ್ರೀಡಾ ಸಂಕೀರ್ಣ ಉದ್ಘಾಟನೆಗೊಳ್ಳಲಿದ್ದು, ಕಾರ್ಯಕ್ರಮದ ಮುನ್ನ ಕ್ರೀಡಾ ಸಂಕೀರ್ಣಕ್ಕೆ ಭೇಟಿ ನೀಡಿದ ವಿಎಸ್‌ವಿ ಪ್ರಸಾದ್ ಅವರು ಕಾರ್ಯಕ್ರಮದ ಮುಖ್ಯ ವೇದಿಕೆ ಹಾಗೂ ಇತ್ಯಾದಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಒಟ್ಟಾರೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಿಎಸ್‌ಆರ್ ಫಂಡ್ ಅಡಿ ಸ್ವರ್ಣಾ ಗ್ರೂಪ್ ಆಫ್ ಕಂಪೆನಿಯು ಈ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಿದ್ದು, ನಾಳೆ ಲೋಕಾರ್ಪಣೆಗೊಳ್ಳಲಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/03/2026 12:03 am
LOADING...