ಮಂಡ್ಯ: ಮಂಡ್ಯದ ವಿಸಿ ಫಾರಂನಲ್ಲಿ ಕೇಂದ್ರ ಸರಕಾರದ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣವಾಗ್ತಿದ್ದು, ನಾಳೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.
ಸುಮಾರು 3 ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು, 14 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಹೀಗಾಗಿ ನಾಳೆ ಬೆಳಗ್ಗೆ ವಿಸಿ ಫಾರಂನಲ್ಲಿ ಶಂಕುಸ್ಥಾಪನೆ ನೆರವೇರಲಿದ್ದು, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಜಿಲ್ಲೆಯ ಜೆಡಿಎಸ್ ಮುಖಂಡರು ಭಾಗಿಯಾಗಲಿದ್ದಾರೆ.
PublicNext
14/03/2026 07:34 am
LOADING...