ಶಿರಸಿ: ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ. ನಗರದ ರಂಗಧಾಮದಲ್ಲಿ ಶನಿವಾರ ಆಯೋಜಿಸಲಾಗಿದ್ದ 'ಆದರ್ಶ ವನಿತಾ ಸಮಾಜ (ರಿ) ಸಹ್ಯಾದ್ರಿ' ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ 'ಲೋಗೋ ಬಿಡುಗಡೆಗೊಳಿಸಿ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಮಾತನಾಡಿದರು.
ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕರು ಕಳೆದ ಐದು ದಶಕಗಳಿಂದ ಆದರ್ಶ ವನಿತಾ ಸಮಾಜವು ಮಹಿಳೆಯರನ್ನು ಸಂಘಟಿಸುವಲ್ಲಿ ಮತ್ತು ಅವರಲ್ಲಿರುವ ವಿವಿಧ ರೀತಿಯ ಪ್ರತಿಭೆಗಳನ್ನು ಹೊರತರುವ ಕೆಲಸ ಅತ್ಯಂತ ಶ್ಲಾಘನೀಯವಾದದ್ದು ಎಂದರು.
ಅಲ್ಲದೇ ಮಹಿಳೆಯರು ಕೇವಲ ಮನೆಗೆ ಸೀಮಿತವಾಗದೆ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಸದೃಢರಾಗಬೇಕು. ಇಂತಹ ಸಂಸ್ಥೆಗಳ ವೇದಿಕೆಯನ್ನು ಬಳಸಿಕೊಳ್ಳುವ ಮೂಲಕ ಮಹಿಳೆಯರು ಸಮಾಜದ ಮುನ್ನಲೆಗೆ ಧಾವಿಸಿ ತಮ್ಮ ಆರ್ಥಿಕ ಪರಿಸ್ಥಿತಿಯನ್ನು ನಿಭಾಹಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಈಗ ಸಂಸ್ಥೆಯ 50 ವರ್ಷಗಳನ್ನು ಪೂರೈಸಿ ಸಾರ್ಥಕ ಹಾದಿಯಲ್ಲಿ ನಡೆಯುತ್ತಿದೆ. ಇದಕ್ಕೆಲ್ಲಾ ಕಾರಣ 50 ವರ್ಷಗಳಿಂದ ಈ ಸಂಸ್ಥೆಯನ್ನು ಕಟ್ಟಿ ಬೆಳಸಿ ಈ ಮಟ್ಟಕ್ಕೆ ತಂದಿರುವುದು ಅತ್ಯಂತ ಸಂತೋಷದ ಘಳಿಗೆ ಆಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆದರ್ಶ ವನಿತಾ ಸಮಾಜದ ಪದಾಧಿಕಾರಿಗಳು, ಪ್ರಮುಖರು ಹಾಗೂ ನೂರಾರು ಸಂಖ್ಯೆಯಲ್ಲಿ ಮಹಿಳಾ ಸದಸ್ಯರು ಉಪಸ್ಥಿತರಿದ್ದರು. .
Kshetra Samachara
14/03/2026 11:30 am
LOADING...