ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ:ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಪರಿಸ್ಥಿತಿ ಸುಧಾರಣೆ: – ಶಾಸಕ ಭೀಮಣ್ಣ ನಾಯ್ಕ

ಶಿರಸಿ:ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಪರಿಸ್ಥಿತಿ ಸುಧಾರಣೆ ಯಾಗಿದೆ.ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಂದು ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಶಾಸಕ ಭೀಮಣ್ಣ ನಾಯ್ಕ ಅವರು ಹೇಳಿದರು.

ನಗರದ ರಾಯರಪೇಟೆಯ ಕನ್ಸೂಮರ್ ಸೊಸೈಟಿಯಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತಾದ ಮಾಹಿತಿ ಫಲಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸರ್ಕಾರದ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ಫಲಕವನ್ನು ಲೋಕಾರ್ಪಣೆ ಮಾಡಲಾಗಿದೆ ಎಂದರು.

ಅಲ್ಲದೇ ಸೊಸೈಟಿಯಂತಹ ಸಾರ್ವಜನಿಕ ಸ್ಥಳಗಳಲ್ಲಿ ಫಲಕಗಳನ್ನು ಅಳವಡಿಸುವುದರಿಂದ ಸಾಮಾನ್ಯ ಜನರಿಗೆ ಯೋಜನೆಗಳ ಸೌಲಭ್ಯ ಮತ್ತು ಅರ್ಹತೆಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ.

ಸೊಸೈಟಿಯಲ್ಲಿ ಸಂಗ್ರಹಿಸಲಾಗಿದ್ದ ಅಕ್ಕಿ ಮತ್ತು ಇತರ ಪಡಿತರ ಪದಾರ್ಥಗಳ ಗುಣಮಟ್ಟವನ್ನು ಖುದ್ದಾಗಿ ಪರಿಶೀಲಿಸಿದರು.

ಸಾರ್ವಜನಿಕರಿಗೆ ವಿತರಿಸಲಾಗುವ ಅಕ್ಕಿಯು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಮತ್ತು ತೂಕದಲ್ಲಿ ಯಾವುದೇ ವ್ಯತ್ಯಾಸವಾಗಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಾಕ್ಷ್ : ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎನ್ನುವುದು ನಮ್ಮ ಗುರಿ. ಪಡಿತರ ವಿತರಣೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರ ವಹಿಸಲಾಗುತ್ತಿದೆ."

— ಶ್ರೀ ಭೀಮಣ್ಣ ಟಿ. ನಾಯ್ಕ, ಶಾಸಕರು.

ಈ ಸಂದರ್ಭದಲ್ಲಿ ಸೊಸೈಟಿಯ ಪದಾಧಿಕಾರಿಗಳು, ಪ್ರಮುಖ ಮುಖಂಡರು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/03/2026 12:34 pm

Cinque Terre

3 K

Cinque Terre

0

ಸಂಬಂಧಿತ ಸುದ್ದಿ