ಮಂಡ್ಯದ ವಿ.ಸಿ. ಫಾರಂನಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಮತ್ತು ಡಾ. ಮನ್ಸುಖ್ ಮಾಂಡವಿಯಾ ಅವರು ಖೇಲೋ ಇಂಡಿಯಾ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇಂದ್ರ ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ವಿ.ಸಿ. ಫಾರಂನ ಒಂದು ಎಕರೆ ಜಾಗದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಖೇಲೋ ಇಂಡಿಯಾ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರು ವೇದಿಕೆಗೆ ಆಗಮಿಸುವ ಮುನ್ನವೇ ಈ ಮಹತ್ವದ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು.
ಗಣ್ಯರ ಉಪಸ್ಥಿತಿ
ಈ ಸಂದರ್ಭದಲ್ಲಿ ಆದಿ ಚುಂಚನಗಿರಿಯ ಪರಮಪೂಜ್ಯ ನಿರ್ಮಲಾನಂದನಾಥಸ್ವಾಮೀಜಿ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ. ತಮ್ಮಣ್ಣ, ಶಾಸಕ ಹೆಚ್.ಟಿ. ಮಂಜು, ಮಾಜಿ ಶಾಸಕ ಡಾ.ಕೆ. ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್, ರಾಮಚಂದ್ರ ಸೇರಿ ಹಲವು ಗಣ್ಯರು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
PublicNext
14/03/2026 03:28 pm
LOADING...