ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಗುವಿಗೆ ಜನ್ಮ ನೀಡಿ, ನದಿಗೆ ಎಸೆದ ತಾಯಿ..! ನಾಲೆಯಲ್ಲಿ ನವಜಾತ ಶಿಶು ಪತ್ತೆ!

ನಂಜನಗೂಡು: ಮಗುವಿಗೆ ಜನ್ಮ ನೀಡಿ ಮಗುವನ್ನು ನದಿಗೆ ಎಸೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.

ನಗರ್ಲೆ ಗ್ರಾಮದ ಶ್ರೀ ಮಾಳೀಗೇಶ್ವರಿ ದೇವಾಲಯದ ಬಳಿ ಹಾದು ಹೋಗಿರುವ ಚಿಕ್ಕ ನಾಲೆಯಲ್ಲಿ ಮಗುವಿನ ಮೃತ ದೇಹ ಪತ್ತೆಯಾಗಿದೆ. ಗಂಡು ಮಗುವಿಗೆ ಜನ್ಮ ನೀಡಿ, ತಾಯಿ ತನ್ನ ಮಗುವನ್ನು ನಾಲೆಗೆ ಎಸೆದು ಹೋಗಿರಬೇಕು ಎಂದು ಶಂಕಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ, ಸಿಡಿಪಿಒ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಗುವಿನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

14/03/2026 06:02 pm

Cinque Terre

2.68 K

Cinque Terre

0

ಸಂಬಂಧಿತ ಸುದ್ದಿ