ಬಾಗಲಕೋಟೆ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ ಎತ್ತಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಬರುವ ಮಂಗಳವಾರದಂದು ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು ಎಂದು ಆಂಧ್ರ ಪ್ರದೇಶದವರು ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಬರೆದಿದ್ದು, ಈ ವಿಚಾರವಾಗಿ ಕೇಂದ್ರ ಸರ್ಕಾರ ನಮಗೆ ಪತ್ರ ಬರೆದು ಸ್ಪಷ್ಟನೆ ಕೇಳಿದೆ ಎಂದರು.
PublicNext
14/03/2026 07:58 pm
LOADING...