ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಾಡಬಸಮ್ಮರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಸಂಪಿಗೆಪುರ: ತೆರಕಣಾಂಬಿ ಯೋಜನಾ ಕಚೇರಿ ವ್ಯಾಪ್ತಿಯ ಕಬ್ಬಳಿ ವಲಯದ ಸಂಪಿಗೆಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಕಾಡಬಸಮ್ಮ ಎಂಬವರಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಲಾಯಿತು.

ಪ್ರಾದೇಶಿಕ ವ್ಯಾಪ್ತಿಯ ಯೋಜನಾಧಿಕಾರಿ ಮೂಕಾಂಬಿಕಾ ಅವರು ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರ ಸಬಲೀಕರಣದ ಬಗ್ಗೆ, ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ, ಮಾಸಿಕ ಯೋಜನೆ ಬಗ್ಗೆ ಮಾರ್ಗದರ್ಶನ ನೀಡಿದರು.

ಪ್ರಸಾದ್ ಮಾತನಾಡಿ, ಧರ್ಮಸ್ಥಳ ಯೋಜನೆಯು ಬರೀ ಸಾಲಕ್ಕಾಗಿ ಅಲ್ಲ. ಡಾ.ಡಿ. ವೀರೇಂದ್ರ ಹೆಗ್ಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ನಿರ್ಗತಿಕರಿಗೆ ಸೌಲಭ್ಯಗಳನ್ನು ನೀಡಿ, ಅವರು ಎಲ್ಲರಂತೆ ನೆಮ್ಮದಿಯಿಂದ ಬದುಕಲು ವ್ಯವಸ್ಥೆ ಮಾಡುತ್ತಾರೆ ಎಂದರು.

ತಾಲೂಕಿನ ಮಾನ್ಯ ಯೋಜನಾಧಿಕಾರಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಸಾದ್ ಹಾಗೂ ಪ್ರಾದೇಶಿಕ ವ್ಯಾಪ್ತಿಯ ಯೋಜನಾಧಿಕಾರಿ ಮೂಕಾಂಬಿಕಾ, ತಾಲೂಕಿನ ಯೋಜನಾಧಿಕಾರಿ ಶಶಿಕುಮಾರ್, ಅಷ್ಟಾವರಣ ಮತ್ತು ಮಾದೇವಪ್ಪನವರು, ವಲಯ ಮೇಲ್ವಿಚಾರಕ ಯೋಗೀಶ್, ಸೇವಾ ಪ್ರತಿನಿಧಿಗಳಾದ ಗೌರಮ್ಮ, ನಾಗವೇಣಿ, ಸುಮಾ, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

14/03/2026 08:15 pm

Cinque Terre

1.86 K

Cinque Terre

0

ಸಂಬಂಧಿತ ಸುದ್ದಿ