ಹೊಸಪೇಟೆ : ಗೃಹ ಬಳಕೆಗಾಗಿ ರಿಯಾಯಿತಿ ದರದಲ್ಲಿ ನೀಡಲಾಗುವ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಜಿಲ್ಲೆಯ ವಾಣಿಜ್ಯ ಸಂಸ್ಥೆಗಳಲ್ಲಿ ನಿಯಮಬಾಹಿರವಾಗಿ ಬಳಸುತ್ತಿರುವುದನ್ನು ಪತ್ತೆ ಹಚ್ಚಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಹಾರ ನಿರೀಕ್ಷಕರು ಜಿಲ್ಲೆಯಾದ್ಯಂತ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಹೋಟೆಲ್, ಬೇಕರಿ, ಫಾಸ್ಟ್ ಫುಡ್ ಸೆಂಟರ್, ಜನನಿಬಿಡ ಆಟೋ ಹಾಗೂ ಬಸ್ ನಿಲ್ದಾಣಗಳ ಬಳಿಯಿರುವ ಉಪಾಹಾರ ಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾಲೀಕರಿಗೆ ಗೃಹ ಬಳಕೆ ಸಿಲಿಂಡರ್‌ಗಳನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ಉದ್ದೇಶಗಳಿಗೆ ಬಳಸಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಕಂಡುಬಂದಲ್ಲಿ, ಅಂತಹ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಮಾಲೀಕರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಎಚ್ಚರಿಕೆ ನೀಡಿದರು.
Kshetra Samachara
14/03/2026 10:45 pm
LOADING...