ಶಿವಮೊಗ್ಗ : ಗ್ಯಾಸ್ ಕುರಿತು ಸದನದಲ್ಲಿ ಚರ್ಚೆ ನಡೆದಿದೆ. ರಾಜ್ಯದಲ್ಲಿ ಸದ್ಯ ಯಾವುದೇ ಸಮಸ್ಯೆ ಇಲ್ಲ. ಎಲ್ಲಾ ಕಡೆ ಗ್ಯಾಸ್ ಡಿಸೇಲ್ ಪೆಟ್ರೋಲ್ ಲಭ್ಯತೆ ಇದೆ ಎಂದು ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಜಿಲ್ಲೆಯಲ್ಲೂ ಗ್ಯಾಸ್ ಸಮಸ್ಯೆ ಕಂಡುಬಂದಿಲ್ಲ. ಈ ಕುರಿತು ಡಿಸಿಯವರ ಜೊತೆ ಮಾತನಾಡಿದ್ದೇನೆ, ಕುಡಿಯುವ ನೀರು ಕುರಿತಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಬೇಸಿಗೆ ಪ್ರಾರಂಭವಾಗಿದ್ದು, ಈ ಕುರಿತು ಚರ್ಚೆ ನಡೆಸಲಾಗಿದೆ. ಈ ಕುರಿತು ನಾನು ಹಿಂದೆಯೇ ವಿಧಾನಸೌಧದಲ್ಲಿ ಚರ್ಚೆ ನಡೆಸಿದ್ದೇನೆ ಎಂದರು.
PublicNext
15/03/2026 10:26 am
LOADING...