ಚಾಮರಾಜನಗರ : ಜಿಲ್ಲೆಯ ಯಳಂದೂರು ಪಟ್ಟಣದ ಅರಣ್ಯ ಇಲಾಖೆಯ ಸಮೀಪ ಇರುವ ರಾಷ್ಟ್ರೀಯ ಹೆದ್ದಾರಿ 948ರ ವೃತ್ತದಲ್ಲಿ ಭಾನುವಾರ ಟಾಟಾ ಏಸಿ ವಾಹನ ಪಲ್ಟಿಯಾದ ಪರಿಣಾಮ 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ
ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯಪುರ ಗ್ರಾಮದ ಸುಮಾರು 20ಕ್ಕೂ ಹೆಚ್ಚು ಮಂದಿ ಕೊಳ್ಳೇಗಾಲದ ಚಿಕ್ಕಲ್ಲೂರು ದೇವಸ್ಥಾನಕ್ಕೆ ಪೂಜೆಗೆ ತೆರಳುತ್ತಿದ್ದ ವೇಳೆ ಬೈಕ್ ಅಡ್ಡ ಬಂದ ಕಾರಣ ಚಾಲಕ ನಿಯಂತ್ರಣ ಕಳೆದುಕೊಂಡು ವಾಹನ ಪಲ್ಟಿಯಾಗಿದೆ.
ವಾಹನದಲ್ಲಿದ್ದ 20 ಮಂದಿಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಯಳಂದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
Kshetra Samachara
15/03/2026 02:56 pm
LOADING...