ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಭಂಡಾರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸುಮಾರು 300 ಮೀಟರ್ ದೂರದವರೆಗೆ ಎಳೆಯಲ್ಪಟ್ಟಿತು. ಪೊಲೀಸ್ ಅಧಿಕಾರಿಗಳಾದ ಮಂಜುನಾಥ, ಅಮರೇಶ್, ಸಚಿನ್, ಸಾವನ್ನಪ್ಪಿದ್ದಾರೆ. ಹಾಗೂ ಈರೇಶ್, ಲಕ್ಷ್ಮಣ್ ಎಂ. ಡಿ ಇಬ್ಬರು ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
PublicNext
15/03/2026 04:22 pm
LOADING...