ವಿಜಯಪುರ: ಈಜಲು ತೆರಳಿದ್ದ ಯುವಕನೋರ್ವ ಭೀಮಾ ನದಿಯಲ್ಲಿ ಮುಳುಗಿ ನಾಪತ್ತೆಯಾಗಿರುವ ದುರಂತ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಪಡನೂರು ಗ್ರಾಮದ ಬಳಿ ಸಂಭವಿಸಿದೆ.
ಪಡನೂರು ಗ್ರಾಮದ ಅನಿಲ್ ಕುಮಾರ್ ಪೂಜಾರಿ ಎಂಬುವವರೇ ನದಿಯಲ್ಲಿ ನಾಪತ್ತೆಯಾದ ದುರ್ದೈವಿ ಯುವಕ. ಇಂದು ಈಜಲು ತೆರಳಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅನಿಲ್ ಕುಮಾರ್ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಯುವಕನಿಗಾಗಿ ತೀವ್ರ ಹುಡುಕಾಟ ನಡೆಸಿದರು. ತದನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೋಟಾರ್ ಬೋಟ್ ಮೂಲಕ ಭೀಮಾ ನದಿಯಲ್ಲಿ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.
ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.
-ಪಬ್ಲಿಕ್ ನೆಕ್ಸ್ಟ್, ವಿಜಯಪುರ
PublicNext
15/03/2026 06:13 pm
LOADING...