ಶಿವಮೊಗ್ಗ: ಹೊಸನಗರ ತಾಲೂಕಿನ ಕುಸುಗುಂಡಿ ಗ್ರಾಮದಲ್ಲಿ ಇತ್ತೀಚೆಗೆ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಲ್ಲಿ ಸುಮಾರು 250ಕ್ಕೂ ಹೆಚ್ಚು ಅಡಿಕೆ ಮರಗಳು ಬೆಂಕಿಗೆ ಆಹುತಿಯಾದ ಹಿನ್ನೆಲೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದುರಂತದಲ್ಲಿ ನಷ್ಟ ಅನುಭವಿಸಿದ ರೈತ ಚಂದ್ರಶೇಖರ್ ಆಚಾರ್ ಅವರ ಅಡಿಕೆ ತೋಟವನ್ನು ಪರಿಶೀಲಿಸಿದ ಶಾಸಕರು, ರೈತನ ಕಷ್ಟ-ಸಂಕಷ್ಟಗಳನ್ನು ಆಲಿಸಿ ಧೈರ್ಯ ತುಂಬಿದರು. ಹಲವು ವರ್ಷಗಳ ಪರಿಶ್ರಮದಿಂದ ಬೆಳೆದ ಅಡಿಕೆ ತೋಟ ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿರುವುದನ್ನು ಕಂಡು ವಿಷಾದ ವ್ಯಕ್ತಪಡಿಸಿದರು.
ಈ ವೇಳೆ ರೈತನಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದ ಶಾಸಕರು, ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಘಟನೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
Kshetra Samachara
16/03/2026 09:59 am
LOADING...