ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಹಕಾರ ರಂಗದ ಭೀಷ್ಮ ಕೆ.ಎಚ್.ಪಾಟೀಲ ಸಂಸ್ಮರಣ ದತ್ತಿ ಉದ್ಘಾಟನೆ

ಧಾರವಾಡ: ಸಹಕಾರ ರಂಗದ ಭೀಷ್ಮ ಎಚ್.ಕೆ. ಪಾಟೀಲ ಅವರು ನಾಡಿಗೆ ನೀಡಿದ ಕೊಡುಗೆ ದೊಡ್ಡದು ಎಂದು ಇಂದಿರಾಗಾಂಧಿ ಬುಡಕಟ್ಟು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ತೇಜಸ್ವಿ ಕಟ್ಟಿಮನಿ ಹೇಳಿದರು.

ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರವಿವಾರ ಸರಕಾರ ರಂಗದ ಭೀಷ್ಮ ಕೆ.ಎಚ್.ಪಾಟೀಲ ಸಂಸ್ಮರಣ ದತ್ತಿ ಹಾಗೂ ೧೦೧ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದ ಅಭ್ಯುದಯಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ. ಗದಗ ಜಿಲ್ಲೆ ಮಾಡುವಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ. ಅವರ ಕಾರ್ಯಗಳನ್ನು ನಾವು ಸ್ಮರಿಸಿಕೊಳ್ಳುವುದು ಅವಶ್ಯ ಎಂದರು.

ಮಾಜಿ ಸಂಸದ ಐ.ಜಿ. ಸನದಿ ಮಾತನಾಡಿ, ಅಧಿಕಾರ ಇರಲಿ, ಇಲ್ಲದಿರಲಿ ಕೆ.ಎಚ್. ಪಾಟೀಲ ಅವರದು ಹೋರಾಟದ ಬದುಕು. ಗ್ರಾಮೀಣ ಅಭಿವೃದ್ಧಿ ಕ್ಷೇತ್ರದ ಪ್ರಗತಿಗೆ ಅವರು ನೀಡಿದ ಕೊಡುಗೆ ಅನನ್ಯವಾದುದು ಎಂದರು.

ಕಾರ್ಯಕ್ರಮದಲ್ಲಿ ಶ್ರೀನಿವಾಸ ವಾಡಪ್ಪಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸತೀಶ ತುರಮರಿ ವೇದಿಕೆ ಮೇಲಿದ್ದರು. ಶಂಕರ ಕುಂಬಿ ಸ್ವಾಗತಿಸಿದರು. ಬಸವಪ್ರಭು ಹೊಸಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಜಿನದತ್ತ ಹಡಗಲಿ ನಿರೂಪಿಸಿದರು

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/03/2026 11:39 am

Cinque Terre

29.49 K

Cinque Terre

0

ಸಂಬಂಧಿತ ಸುದ್ದಿ