ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೀರಾವರಿ ಹೆಸರಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನಿರಾಸೆಯ ಬುತ್ತಿ

ಕಾಗವಾಡ:ನೀರಾವರಿ ಯೋಜನೆಯ ಹೆಸರಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ಸಿಗದೇ ನಿರಾಸೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಸುಮಾರು ಎಂಟು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿರುವ ಬಸವೇಶ್ವರ ಏತ ನೀರಾವರಿ ಯೋಜನೆ ಇನ್ನೂ ಪೂರ್ಣಗೊಳ್ಳದಿದ್ದು, ಭೂಮಿ ಕಳೆದುಕೊಂಡ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರದಿಂದ ಪರಿಹಾರ ಸಿಗಬೇಕಾಗಿದ್ದರೂ, ಇದುವರೆಗೆ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ. ಇದರಿಂದ ರೈತರು “ಇತ್ತ ನೀರಿಲ್ಲ, ಅತ್ತ ಭೂಮಿಯೂ ಇಲ್ಲ” ಎಂಬ ಸ್ಥಿತಿಗೆ ತಲುಪಿದ್ದಾರೆ.

ಸುಮಾರು 1437 ಕೋಟಿ ರೂ. ವೆಚ್ಚದ ಈ ಯೋಜನೆಗೆ ಸಂಬಂಧಿಸಿದಂತೆ ಕಾಲುವೆ ಅಭಿವೃದ್ಧಿ ಕಾಮಗಾರಿಗಳಿಗೆ ಕಳೆದ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಅಲ್ಲದೆ, ರೈತರಿಗೆ ನೀಡಬೇಕಿರುವ 277 ಕೋಟಿ ರೂ. ಭೂ ಪರಿಹಾರ ವಿಚಾರದಲ್ಲೂ ಯಾವುದೇ ಸ್ಪಷ್ಟತೆ ಇಲ್ಲ ಎನ್ನಲಾಗಿದೆ.

ನೆರೆಯ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿರುವುದನ್ನು ಗಮನಿಸಿದ ಸ್ಥಳೀಯರು, ತಮ್ಮ ಕ್ಷೇತ್ರದ ಜನಪ್ರತಿನಿಧಿಗಳ ಅಸಮರ್ಥತೆಯನ್ನು ಪ್ರಶ್ನಿಸುತ್ತಿದ್ದಾರೆ. ಯೋಜನೆ ಬಗ್ಗೆ ನಿರ್ಲಕ್ಷ್ಯ ಯಾಕೆ ಎಂಬ ಪ್ರಶ್ನೆ ಗಡಿ ಭಾಗದ ಜನರಲ್ಲಿ ತೀವ್ರ ಅಸಮಾಧಾನ ಹುಟ್ಟಿಸಿದೆ.

ಈ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಹಾಗೂ ಯೋಜನೆ ಕಾಮಗಾರಿಗಳನ್ನು ವೇಗಗೊಳಿಸಬೇಕು ಎಂಬ ಒತ್ತಾಯಗಳು ಹೆಚ್ಚುತ್ತಿವೆ.

Edited By : PublicNext Desk
Kshetra Samachara

Kshetra Samachara

16/03/2026 12:31 pm

Cinque Terre

10.66 K

Cinque Terre

0