ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲಾಡಳಿತದಿಂದ ಸಕಲ ಸಿದ್ದತೆ

ಚಾಮರಾಜನಗರ : ಜಿಲ್ಲೆಯಲ್ಲಿ ಮಾ.18 ರಿಂದ ಏ.2ರವರೆಗೆ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಕ್ಕೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಹೇಳಿದರು.

2025-26ನೇ ಸಾಲಿನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ ಶಾಲಾ ಅಭ್ಯರ್ಥಿಗಳು, ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ಅಭ್ಯರ್ಥಿಗಳು ಸೇರಿ ಒಟ್ಟು 12,128 ಅಭ್ಯರ್ಥಿಗಳು ನೋಂದಾಯಿಸಿ ಕೊಂಡಿದ್ದಾರೆ.ಅಲ್ಲದೆ 99 ಅಂಗವಿಕಲ ಅಭ್ಯರ್ಥಿಗಳು ನೋಂದಾಯಿಸಿ ಕೊಂಡಿದ್ದಾರೆ. ಜಿಲ್ಲೆಯ 47 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 19 ಗೌಪ್ಯ ಸಾಮಾಗ್ರಿಗಳ ವಿತರಣೆ ಮಾರ್ಗಗಳನ್ನು ಮಾಡಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಮಾ.18 ರಂದು ಪ್ರಥಮ ಭಾಷೆ, 23 ರಂದು ವಿಜ್ಞಾನ, ರಾಜ್ಯಶಾಸ್ತ್ರ, 25 ರಂದು ಇಂಗ್ಲೀಷ್, ಕನ್ನಡ, 28 ರಂದು ಗಣಿತ, ಸಮಾಜಶಾಸ್ತ್ರ, 30 ರಂದು ತೃತೀಯ ಭಾಷೆ ಹಿಂದಿ, ಏ.1 ಜೆಟಿಎಸ್ ವಿಷಯಗಳು ಹಾಗೂ ಏ.2 ರಂದು ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ವೆಬ್ ಕಾಸ್ಟಿಂಗ್‌ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ವೆಬ್ ಕಾಸ್ಟ್ ಮಾಡಲು ಜಿಲ್ಲಾ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಪ್ರದೇಶದ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸರಬರಾಜಿಗೆ ಸೆಸ್ಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಪರೀಕ್ಷಾ ದಿನಗಳಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ  ಕೆಎಸ್‌ಆರ್‌ಟಿಸಿ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ನಿಗಮಕ್ಕೆ ನಿರ್ದೇಶನ ನೀಡಲಾಗಿದೆ. ಪರೀಕ್ಷಾ . ಕೇಂದ್ರದಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

16/03/2026 03:39 pm

Cinque Terre

700

Cinque Terre

0

ಸಂಬಂಧಿತ ಸುದ್ದಿ