ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದಲ್ಲಿ ಭಾರಿ ಪ್ರತಿಭಟನೆ, ಡಿಸಿ ಕಚೇರಿಗೆ ನುಗ್ಗಲು ಯತ್ನ

ಶಿವಮೊಗ್ಗ : ರಾಜ್ಯದಲ್ಲಿ ಒಳಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಮಾದಾರ ಮಹಾಸಭಾ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನ ನಡೆಸಿತು. ಈ ವೇಳೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಪ್ರಯತ್ನಿಸಿದ್ದು, ಕೆಲಕಾಲ ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲುಪಿತ್ತು.

ಮಹಾನಗರ ಪಾಲಿಕೆ ಆವರಣದ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿ ಆರಂಭವಾದ ಈ ಆಕ್ರೋಶದ ನಡಿಗೆ, ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿತು. ಅಮೀರ್ ಅಹಮದ್ ವೃತ್ತದಲ್ಲಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿಳಂಬ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ತೀವ್ರ ವಿರೋಧವನ್ನು ವ್ಯಕ್ತಪಡಿಸಿದರು.

ನಗರದ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರಿಂದ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ತಲುಪುತ್ತಿದ್ದಂತೆ, ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಭೇದಿಸಿ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಭಾರಿ ತಳ್ಳಾಟ-ನೂಕಾಟ ನಡೆಯಿತು.

Edited By : PublicNext Desk
Kshetra Samachara

Kshetra Samachara

16/03/2026 05:42 pm

Cinque Terre

1.1 K

Cinque Terre

0

ಸಂಬಂಧಿತ ಸುದ್ದಿ