ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರಪುರ.. (ಯಾದಗಿರಿ) ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಸಾವು ತನಿಖೆಗೆ ಒತ್ತಾಯ..

ಯಾದಗಿರಿ : ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ವತಿಯಿಂದ ಸುರಪುರ ನಗರದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಸ್ವಾತಿ ಶರಣಗೌಡ(17) ಎನ್ನುವ ವಿದ್ಯಾರ್ಥಿನಿಯ ಶವ ವಸತಿ ನಿಲಯದ ಕಿಟಕಿಯೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಯುವತಿ ಸಾವನ್ನಪ್ಪಿರುವ ರೀತಿ ನೋಡಿದರೆ ಆತ್ಮಹತ್ಯೆಯಲ್ಲ ಕೊಲೆಯಾಗಿರುವ ಶಂಕೆ ಇದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ವಸತಿ ನಿಲಯಗಳಲ್ಲಿ ಕಳೆದ ಹಲವು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ನೀಡಿ ದೌರ್ಜನ್ಯ ಮತ್ತು ಸಾವಿನಂತಹ ಘಟನೆಗಳಿಗೆ ಕಾರಣರಾಗಿದ್ದಾರೆ. ಅಂತಹವರನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ.

Edited By :
PublicNext

PublicNext

16/03/2026 06:04 pm

Cinque Terre

12.15 K

Cinque Terre

0

ಸಂಬಂಧಿತ ಸುದ್ದಿ