ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿಯಲ್ಲಿ ಆಶಾ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

ಬಳ್ಳಾರಿ : ಆಶಾ ಕಾರ್ಯಕರ್ತರಿಗೆ ಜನಸಂಖ್ಯೆಯನ್ನು ತರ್ಕಬದ್ಧಗೊಳಿಸುವ ಹೆಸರಲ್ಲಿ ಸಾವಿರಾರು ಆಶಾಗಳನ್ನು ವಜಾಗೊಳಿಸುವ ಆರೋಗ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ನಿರ್ಧಾರವು ಆಶಾಗಳಿಗೆ ಘೋರ ಆಘಾತ ತಂದಿದೆ. ಇದೇ ವೃತ್ತಿಯನ್ನು ನಂಬಿರುವ ಆಶಾ ಮತ್ತವರ ಕುಟುಂಬಗಳು ಬೀದಿಗೆ ಬರುವ ಆತಂಕ ಎದುರಾಗಿದೆ ಎಂದು ಆರೋಪಿಸಿ ಎಐಯುಟಿಯುಸಿ ಯೋಜನೆಗೊಂಡ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಬಳ್ಳಾರಿ ಜಿಲ್ಲಾ ಸಮಿತಿಯು ಅನಿರ್ದಿಷ್ಟ ಪ್ರತಿಭಟನಾ ಧರಣಿಯನ್ನು ನಡೆಸಿದರು... ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮುಖಂಡರು, ಬಳ್ಳಾರಿ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಬಿಡುವ ಯೋಜನೆ ಈಗಾಗಲೇ ಸಿದ್ಧವಾಗಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ. ಈ ಕ್ರಮವು ಕೇಂದ್ರದ ಮಾರ್ಗಸೂಚಿಯ ಉಲ್ಲಂಘನೆ ಆಗಿದೆ.

ದೇಶದ ಯಾವುದೇ ರಾಜ್ಯದಲ್ಲಿ ಇಲ್ಲದ ಇಂತಹ ಕ್ರಮವನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿದೆ. ಕೈಬಿಟ್ಟ ಆಶಾಗಳನ್ನು ನಿಯಮಾನುಸಾರ 'ಡಿ' ಗ್ರೂಪ್ ನೌಕರರನ್ನಾಗಿ ತೆಗೆದುಕೊಳ್ಳಲಾಗುವುದು ಎನ್ನುವುದು ಕೇವಲ ಬಾಯಿ ಮಾತಿನ ಹೇಳಿಕೆ ಅಷ್ಟೇ, ಸಾವಿರಾರು ಆಶಾಗಳನ್ನು ವಜಾಗೊಳಿಸುವುದು ಇದರ ಹಿಂದಿರುವ ಉದ್ದೇಶವಾಗಿದೆ ಎಂದು ಕಿಡಿಕಾರಿದರು..

Edited By : Shivu K
PublicNext

PublicNext

16/03/2026 10:57 pm

Cinque Terre

13.88 K

Cinque Terre

1