ಮಡಿಕೇರಿ: ಜಿಲ್ಲೆಯಲ್ಲಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್‌ಗಳ ಲಭ್ಯತೆ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ತೆರೆ ಎಳೆದಿರುವ ಕೊಡಗು ಜಿಲ್ಲಾಧಿಕಾರಿ ಸೋಮಶೇಖರ್, ಪ್ರಮುಖ ಮಾಹಿತಿ ನೀಡಿದ್ದಾರೆ.
ಗ್ಯಾಸ್ ಸಿಲಿಂಡರ್ ಪೂರೈಕೆಗೆ ಯಾವುದೇ ಅಡ್ಡಿಯಿಲ್ಲ
ಜಿಲ್ಲೆಯಲ್ಲಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್‌ಗಳ ಸಂಗ್ರಹ ಸಮರ್ಪಕ ಪ್ರಮಾಣದಲ್ಲಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಯಾವುದೇ ಆತಂಕಕ್ಕೆ ಒಳಗಾಗದೆ, ತಮ್ಮ ಅಗತ್ಯಕ್ಕೆ ತಕ್ಕಂತೆ ಮಾತ್ರ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಿ ಪಡೆದುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ
ಅಡುಗೆ ಅನಿಲದ ಸುಗಮ ಮತ್ತು ಸಮರ್ಪಕ ಪೂರೈಕೆ ಖಚಿತಪಡಿಸಿಕೊಳ್ಳಲು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‍ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಂಗ್ರಹ ಮತ್ತು ಸರಬರಾಜು ಎಂದಿನಂತೆ ಸುಗಮವಾಗಿ ಲಭ್ಯವಿದ್ದು, ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸಿಲಿಂಡರ್‌ಗಳನ್ನು ತಲುಪಿಸಲಿದ್ದಾರೆ. ಈ ಕುರಿತು ಜಿಲ್ಲೆಯ ಎಲ್ಲಾ ಎಲ್‍ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ.
Kshetra Samachara
17/03/2026 07:20 am
LOADING...