ಸೋಮವಾರಪೇಟೆ: ಕೊಡಗು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಸೋಮವಾರಪೇಟೆ ತಾಲೂಕಿನ ಕುಂದಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದ ಅಚ್ಚರಿಯ ಘಟನೆ ನಡೆದಿದೆ.
ಘಟನೆಯ ವಿವರ
ನಿನ್ನೆ (ಭಾನುವಾರ) ರಾತ್ರಿ ಕುಂದಳ್ಳಿ ಗ್ರಾಮದಲ್ಲಿ ಭಾರಿ ಮಳೆಯೊಂದಿಗೆ ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. ಈ ವೇಳೆ ಗ್ರಾಮದ ನಂದೀಶ್ ಎಂಬುವವರಿಗೆ ಸೇರಿದ ತೆಂಗಿನ ಮರಕ್ಕೆ ಸಿಡಿಲು ಬಡಿದು ತಕ್ಷಣ ಬೆಂಕಿ ಹೊತ್ತಿಕೊಂಡಿದೆ.
ವಿಡಿಯೋ ವೈರಲ್
ಈ ವಿಶಿಷ್ಟ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿದಿದ್ದು, ಬೆಂಕಿ ಹೊತ್ತಿಕೊಂಡು ಹೊಗೆ ಸೂಸುತ್ತಿದ್ದ ತೆಂಗಿನ ಮರದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
PublicNext
17/03/2026 07:32 am
LOADING...