ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು: KSRTC ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ; ಸಿಂಧನೂರು ನಿಲ್ದಾಣದಲ್ಲಿ ದುರಂತ

ರಾಯಚೂರು: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕತೆಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯ ಸಿಂಧನೂರು ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.

ಕಾರಟಗಿ ಗ್ರಾಮದ ಈರಮ್ಮ (38) ಮೃತ ದುರ್ದೈವಿ. ರಾಯಚೂರಿನಿಂದ ಬಳ್ಳಾರಿಗೆ ಹೊರಟಿದ್ದ ಬಸ್, ಸಿಂಧನೂರು ನಿಲ್ದಾಣಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಕ್ರಗಳು ಮೈಮೇಲೆ ಹರಿದ ಪರಿಣಾಮ ದೇಹ ನಜ್ಜುಗುಜ್ಜಾಗಿದ್ದು, ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

​ಘಟನಾ ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದ ಈ ಭೀಕರ ದೃಶ್ಯಗಳು ನಿಲ್ದಾಣದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎದೆ ಝಲ್ಲೆನಿಸುವಂತಿದೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

17/03/2026 08:08 am

Cinque Terre

9.42 K

Cinque Terre

1