ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ಕೃಷಿ ಜಮೀನಿನಲ್ಲಿ ಬೆಳೆ ಕಾವಲಿಗೆ ಹಾಕಲಾಗಿದ್ದ ವಿದ್ಯುತ್ ತಂತಿ ತಗುಲಿ ಹುಲಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಗ್ರಾಮದ ರವಿಚಂದ್ರ ಎಂಬವರ ಜಮೀನನ್ನು ಗುತ್ತಿಗೆ ಪಡೆದಿದ್ದ ಪರಮೇಶ್ ಅವರು ಈ ವ್ಯವಸ್ಥೆ ಮಾಡಿದ್ದರು ಎನ್ನಲಾಗಿದೆ. ಥರ್ಮಲ್ ಡ್ರೋಣ್ ಕಾರ್ಯಾಚರಣೆ ವೇಳೆ ಹುಲಿಯ ಮೃತ ದೇಹ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಬಫರ್ ವಲಯದ ಅಧಿಕಾರಿಗಳು ಮತ್ತು ತೆರಕಣಾಂಬಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ಹುಲಿ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಸಿತ್ತು.
PublicNext
17/03/2026 09:13 am
LOADING...