ಭಟ್ಕಳ: ಭಟ್ಕಳ ಪಟ್ಟಣದಲ್ಲಿ ಹೃದಯಾಘಾತದಿಂದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಮೃತರನ್ನು ಕುಕನೂರು ನಿವಾಸಿ, 54 ವರ್ಷದ ಮಂಜುನಾಥ ಜಟ್ಟ ನಾಯ್ಕ ಎಂದು ಗುರುತಿಸಲಾಗಿದೆ.
ಮಂಜುನಾಥ ಜಟ್ಟ ನಾಯ್ಕ ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಎಂದಿನಂತೆ ಮನೆಯಿಂದ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದರು. ಆದರೆ, ಭಟ್ಕಳ ನಗರದ ಭಾರತ ಪೆಟ್ರೋಲ್ ಬಂಕ್ ಪಕ್ಕದ ದಿಲ್ಮನ್ ಮನೆ ಸಮೀಪದ ಖಾಲಿ ಜಾಗದಲ್ಲಿ ಅವರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಹೃದಯಾಘಾತದ ಶಂಕೆ, ತನಿಖೆ ಆರಂಭ
ಪ್ರಾಥಮಿಕ ಮಾಹಿತಿ ಪ್ರಕಾರ, ಮಂಜುನಾಥ ಜಟ್ಟ ನಾಯ್ಕ ಅವರು ಹೃದಯಾಘಾತ ಅಥವಾ ಇನ್ನಾವುದೋ ಅಸ್ವಸ್ಥತೆಯಿಂದ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಕುರಿತು ಮೃತರ ಸಂಬಂಧಿ ಕೃಷ್ಣ ಸೋಮಯ್ಯ ನಾಯ್ಕ ಅವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Kshetra Samachara
17/03/2026 10:04 am
LOADING...