ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಶಿವಮೊಗ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗಾರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅವರ ಅಂತ್ಯಕ್ರಿಯೆ ತೀರ್ಥಹಳ್ಳಿ ತಾಲೂಕಿನ ಕುಡವಳ್ಳಿಯ ಬಿಸಿಲುಮನೆ ಗ್ರಾಮದಲ್ಲಿ ನೆರವೇರಿತು.

ಪೊಲೀಸ್ ಗೌರವ ವಂದನೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರ ನೇತೃತ್ವದಲ್ಲಿ ಸಚಿನ್ ಅವರಿಗೆ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ ಕಲಗುಜ್ಜಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದ ಬಳಿಕ ಅಂತ್ಯಕ್ರಿಯೆ ವಿಧಿವಿಧಾನಗಳನ್ನು ಪೂರೈಸಲಾಯಿತು.

ಸಚಿನ್ ಅವರ ಬದುಕು ಮತ್ತು ದುರಂತ ಅಂತ್ಯ

ಕೆಲವು ತಿಂಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದ ಸಚಿನ್, ಬಡತನದ ನಡುವೆಯೂ ಬೆಳೆದು ಬಂದವರು. ಮೊದಲು ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸಿ, ನಂತರ ಪರೀಕ್ಷೆ ಬರೆದು ಸಬ್ ಇನ್ಸ್‌ಪೆಕ್ಟರ್ ಹುದ್ದೆಗೇರಿದ್ದರು. ಮೇ 10ರಂದು ಸಚಿನ್ ಅವರ ಮದುವೆ ನಿಶ್ಚಯವಾಗಿದ್ದು, ಮದುವೆಗೂ ಮುನ್ನವೇ ಇಂತಹ ದುರಂತ ಸಂಭವಿಸಿರುವುದು ಎಲ್ಲರನ್ನೂ ಆಘಾತಕ್ಕೀಡು ಮಾಡಿದೆ. ಸಚಿನ್ ತಮ್ಮ ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Edited By : Vijay Kumar
PublicNext

PublicNext

17/03/2026 10:18 am

Cinque Terre

4.61 K

Cinque Terre

0

ಸಂಬಂಧಿತ ಸುದ್ದಿ