ಕೋಲಾರ: ನಗರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಗೃಹ ಬಳಕೆಯ ಸಿಲಿಂಡರ್‌ಗಳನ್ನು ಬಳಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಅಪರ ಜಿಲ್ಲಾಧಿಕಾರಿ ಮಂಗಳ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ತಪಾಸಣೆ ನಡೆಸಿತು. ಕೋಲಾರ ನಗರದ ಸಾಯಿಧಾಮ್, ಆರಾಧ್ಯಗ್ರಾಂಡ್, ಶ್ರೀಹರಿ ದರ್ಶಿನಿ, ಸಹನ ದರ್ಶಿನಿ ಸೇರಿದಂತೆ ಹಲವು ಹೋಟೆಲ್‌ಗಳ ಅಡುಗೆ ಮನೆಗಳಿಗೆ ಎ.ಡಿ.ಸಿ., ತಹಶೀಲ್ದಾರ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ, ಯಾವುದೇ ಕಾರಣಕ್ಕೂ ಹೋಟೆಲ್‌ಗಳಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸಬಾರದು ಎಂದು ಅಧಿಕಾರಿಗಳು ಹೋಟೆಲ್ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
PublicNext
17/03/2026 10:22 am
LOADING...