ಕೊಪ್ಪಳ: ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಗುಂಡೂರು ಲಕ್ಷ್ಮೀಕ್ಯಾಂಪ್‌ನಲ್ಲಿ ಶ್ರೀ ಕೋದಂಡ ರಾಮಚಂದ್ರಸ್ವಾಮಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಕ ದೇವಸ್ಥಾನದಲ್ಲಿ ವಿವಿಧ ಹೋಮ-ಹವನ ಹಾಗೂ ಪೂಜಾ ಕೈಂಕರ್ಯಗಳು ಸಾಂಗವಾಗಿ ನಡೆದಿದೆ. ದೇವಸ್ಥಾನದಲ್ಲಿ ಶ್ರೀರಾಮಚಂದ್ರ ಮೂರ್ತಿಯ ಪ್ರತಿಷ್ಠಾಪನೆ ನೆರವೇರಿದೆ. ಈ ವಿಶೇಷ ಕಾರ್ಯಕ್ರಮದ ಅಂಗವಾಗಿ ಗುಂಡೂರು ಆಂಜನೇಯ ದೇವಸ್ಥಾನದಿಂದ ಲಕ್ಷ್ಮೀಕ್ಯಾಂಪ್‌ವರೆಗೆ ನಡೆದ ಭವ್ಯ ಮೆರವಣಿಗೆಯಲ್ಲಿ ಮಹಿಳೆಯರ ಕೋಲಾಟ ಹಾಗೂ ಡೊಳ್ಳು ಕುಣಿತ ಎಲ್ಲರ ಗಮನ ಸೆಳೆಯಿತು. ಲಕ್ಷ್ಮೀಕ್ಯಾಂಪ್ ಪುಟ್ಟ ಗ್ರಾಮವಾದರೂ ಸುತ್ತಮುತ್ತಲಿನ ಹಳ್ಳಿಗಳು ಬೆರಗಾಗುವಂತೆ ಅತ್ಯಂತ ಅಚ್ಚುಕಟ್ಟಾಗಿ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ . ಸಹಸ್ರಾರು ಭಕ್ತರು ಆಗಮಿಸಿ ಶ್ರೀರಾಮನ ದರ್ಶನ ಪಡೆದಿದ್ದಾರೆ.
PublicNext
17/03/2026 11:15 am
LOADING...