ರಾಯಬಾಗ: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಕೆಲವು ಶಾಲೆಗಳು ಶುಲ್ಕದ ನೆಪದಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ್ ಗ್ರಾಮದಲ್ಲಿರುವ ಅಜಿತಕುಮಾರ್ ಎಸ್. ಬಾನೆ ಅನುದಾನಿತ ಶಾಲೆಯು, 10ನೇ ತರಗತಿ ಓದುತ್ತಿರುವ ಸುಮಾರು 20 ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿದೆ.
ವಿದ್ಯಾರ್ಥಿಗಳ ಗಂಭೀರ ಆರೋಪ
ಶಾಲೆಯು ಪ್ರತಿ ವಿದ್ಯಾರ್ಥಿಗೆ 4000 ರೂ.ಗಳ ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸುವಂತೆ ಸೂಚಿಸಿದೆ. ಯಾವುದೇ ಪೂರ್ವ ಸೂಚನೆಯಿಲ್ಲದೆ ಏಕಾಏಕಿ ಈ ಹಣವನ್ನು ಪಾವತಿಸುವಂತೆ ಕೇಳಲಾಗಿದ್ದು, ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ ಎಂದು ವಿದ್ಯಾರ್ಥಿಗಳು ಶಾಲೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಅಧಿಕಾರಿಗಳಿಗೆ ವಿದ್ಯಾರ್ಥಿಗಳ ಮನವಿ
ಕೂಡಲೇ ನಮಗೆ ಹಾಲ್ ಟಿಕೆಟ್ ನೀಡಿ, ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
PublicNext
17/03/2026 11:44 am
LOADING...