ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಮಾವನೂರಿನಲ್ಲಿ ಅಕ್ರಮ ಖಬರಸ್ಥಾನ್ ನಿರ್ಮಾಣ ಆರೋಪ - ಗ್ರಾಮಸ್ಥರ ಆಕ್ರೋಶ

ಸಕಲೇಶಪುರ: ಆಲೂರು: ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಮಾವನೂರು ಗ್ರಾಮದಲ್ಲಿನ ಸರ್ವೇ ನಂ. 99ರಲ್ಲಿ ಕೆರೆ ಸಮೀಪ ಏಕಾಏಕಿ ಖಬರಸ್ಥಾನ್ (ಮುಸ್ಲಿಂ ಸ್ಮಶಾನ) ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಕೆರೆ ಪಕ್ಕದಲ್ಲೇ ಕಾಂಪೌಂಡ್ ನಿರ್ಮಿಸಿ ಸ್ಮಶಾನ ಮಾಡಿರುವುದು ನಿಯಮಬಾಹಿರವಾಗಿದ್ದು, ಈ ಕೆರೆಯ ನೀರನ್ನು ಪ್ರತಿದಿನ ಸಾವಿರಾರು ಜನರು ಹಾಗೂ ಜಾನುವಾರುಗಳು ಬಳಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೆರೆ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ನಿರ್ಮಾಣ ಕಾರ್ಯ ನಡೆದಿದೆ ಎಂಬ ಶಂಕೆಯೂ ವ್ಯಕ್ತವಾಗಿದೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತರಾದ Raghu Sakleshpur ಅವರು ಮಾತನಾಡಿ, “ಕೆರೆ ಸಮೀಪದಲ್ಲಿ ಸ್ಮಶಾನ ನಿರ್ಮಾಣ ಮಾಡಿರುವುದು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದಲೂ ಸೂಕ್ತವಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ದಾಖಲೆಗಳನ್ನು ಪರಿಶೀಲಿಸಿ ಅಕ್ರಮವಾಗಿದ್ದರೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದಲ್ಲದೇ, ಹೆದ್ದಾರಿ ಪಕ್ಕದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ರಸ್ತೆ ಅಭಿವೃದ್ಧಿ ಸಂದರ್ಭಗಳಲ್ಲಿ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಸುರಕ್ಷತೆಗೆ ಹಾಕಲಾಗಿದ್ದ ಕಬ್ಬಿಣದ ಸರಳುಗಳನ್ನು ಮುರಿದು ದಾರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಕ್ರಮ ಅತಿಕ್ರಮಣವಾಗಿದ್ದರೆ ಕಾಂಪೌಂಡ್ ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಧರ್ಮೇಶ್, ದುಷ್ಯಂತ್ ಗೌಡ, ಸಂತೋಷ್, ಮಹೇಶ್ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

Edited By :
PublicNext

PublicNext

17/03/2026 12:00 pm

Cinque Terre

11.93 K

Cinque Terre

0

ಸಂಬಂಧಿತ ಸುದ್ದಿ