ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀಶೈಲದಿಂದ ಮರಳುತ್ತಿದ್ದಾಗ ದುರಂತ: ಬೆಳಗಾವಿಯ ಮೂವರ ದುರ್ಮರಣ,

ಬೆಳಗಾವಿ: ಆಂಧ್ರಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಯಕ್ಸಂಬಾ ಪಟ್ಟಣದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದರ್ಶನ ಮುಗಿಸಿ ಗ್ರಾಮಕ್ಕೆ ಮರಳುತ್ತಿದ್ದ ಯಕ್ಸಂಬಾ ಪಟ್ಟಣದ ಮೂವರು, ಸೋಮವಾರ ಸಂಜೆ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಯಕ್ಸಂಬಾ ಪಟ್ಟಣದ ನಿವಾಸಿಗಳಾದ ಅಜೀತ ಸಾತ್ವಾರ (28), ಗೌರವ ಶಹಾ (42), ಅಲಕಾ ಸಿಂಧೆ, (60)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶ ರಾಜ್ಯದ ಮರಕಾಪುರ ಜಿಲ್ಲೆಯ ಕಂಬಂ ಗ್ರಾಮದ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಕ್ರೂಸರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ರೂಸರ್ ನಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. 14 ಜನ ಕ್ರೂಸರ್ ನಲ್ಲಿ ಪ್ರಯಾಣಿಸುತ್ತಿದ್ದರು. ಎಲ್ಲರೂ ಯಕ್ಸಂಬಾ ಪಟ್ಟಣದ ನಿವಾಸಿಗಳಾಗಿದ್ದಾರೆ.

Edited By : Manjunath H D
PublicNext

PublicNext

17/03/2026 03:19 pm

Cinque Terre

11.22 K

Cinque Terre

0

ಸಂಬಂಧಿತ ಸುದ್ದಿ