ಚಾಮರಾಜನಗರ : ಸಿಲಿಂಡರ್ ಸ್ಪೋಟಗೊಂಡು ದಂಪತಿ ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಪರಮೇಶ್ (50) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮಾ.10 ರಂದು ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿರುವ ಪರಮೇಶ್ ಅವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಪರಮೇಶ್ ಹಾಗೂ ಇವರ ಪತ್ನಿ ಜ್ಯೋತಿ ತೀವ್ರವಾಗಿ ಗಾಯಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ 7 ದಿನಗಳಿಂದಲೂ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಪರಮೇಶ್ ಅವರು ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇವರ ಪತ್ನಿ ಜ್ಯೋತಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ
ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಮಾ.10 ರಂದು ಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ಸಾಮಾಗ್ರಿಗಳು, ದವಸ ಧಾನ್ಯಗಳು ಸೇರಿದಂತೆ ಲಕ್ಷಾಂತರ ರೂ. ಪರಿಕರಗಳು ಬೆಂಕಿಯಲ್ಲಿ ಭಸ್ಮವಾಗಿದ್ದವು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Kshetra Samachara
17/03/2026 04:44 pm
LOADING...