ಮಡಿಕೇರಿ: ಜಿಲ್ಲೆಯ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಡುವುದರೊಂದಿಗೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲು ಒತ್ತಾಯಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಕೊಡಗು ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ಸಂಘಟನೆ ಮುಖಂಡ ಪಿ.ಆರ್. ಭರತ್, ಆದಿವಾಸಿ ಕುಟುಂಬಗಳಾದ ಜೇನುಕುರುಬ, ಸೋಲಿಗ, ಯರವ, ಪಣೆ ಯರವ, ಕಾಡುಕುರುಬ, ಕೊರಗ, ನಾಯ್ಕ ಸೇರಿದಂತೆ ಇನ್ನಿತರರು ಜಿಲ್ಲೆಯ ಮೂಲನಿವಾಸಿಗಳಾಗಿದ್ದು, ಜಿಲ್ಲೆಯಲ್ಲಿ ಹುಟ್ಟಿ ಬೆಳೆದು ಸ್ವಂತ ವಾಸಕ್ಕೆ ಮನೆ ಇಲ್ಲದ ಆಶ್ರಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ ಇಲ್ಲ ಎಂಬ ಕಾರಣಕ್ಕಾಗಿ ಜಿಲ್ಲೆಯ ಹಲವಾರು ತೋಟದ ಮಾಲೀಕರ ಮನೆಗಳಲ್ಲಿ ಜೀತದಾಳುಗಳಾಗಿ ಕೆಲಸ ಮಾಡಬೇಕದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ, ಇನ್ನಿತರ ಕಾರ್ಮಿಕ ಕಾನೂನಿನಡಿಯಲ್ಲಿ ಸಿಗಬೇಕಾಗ ಯಾವುದೇ ಸೌಲಭ್ಯಗಳು ದೊರೆಯದೆ ಆದಿವಾಸಿ ಜನಾಂಗ ಬಾಂಧವರು ವಂಚಿತರಾಗುತ್ತಿದ್ದಾರೆ. ಜೀವನಕ್ಕೆ ಬೇಕಾದ ಆಹಾರ ಪದಾರ್ಥಗಳನ್ನು ಪಡೆದುಕೊಳ್ಳಲು ಬಟ್ಟೆ-ಬರೆಗಳನ್ನು ಕೊಂಡುಕೊಳ್ಳಲು ಉತ್ತಮ ಶಿಕ್ಷಣ ಪಡೆದುಕೊಳ್ಳಲು ಮತ್ತು ಅನಾರೋಗ್ಯವಾದಾಗ ಔಷಧಿ ಪಡೆದುಕೊಳ್ಳಲು ಕೂಡ ಸಾಧ್ಯವಾಗದೆ ಅನಾರೋಗ್ಯಪೀಡಿತರಾಗಿ ಮರಣ ಹೊಂದುವ ಸಂಭವಗಳು ನಡೆಯುತ್ತಿದೆ. ಹೀಗಾಗಿ ಸರ್ಕಾರ ಆದಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಒತ್ತಾಯಿಸಿದರು.
Kshetra Samachara
17/03/2026 05:44 pm
LOADING...