ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಆಲಿಕಲ್ಲು ಸಹಿತ ಮಳೆ : ಸಿಡಿಲು ಬಡಿದು ಎಮ್ಮೆ ಸಾವು

ನವಲಗುಂದ: ತಾಲೂಕಿನ ವಿವಿಧ ಗ್ರಾಮಗಳು ಸೇರಿ ನಗರದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಅನೇಕ ಕಡೆ ಹಾನಿ ಸಂಭವಿಸಿದ ಘಟನೆ ಜರುಗಿದೆ.ನವಲಗುಂದ: ತಾಲೂಕಿನ ವಿವಿಧ ಗ್ರಾಮಗಳು ಸೇರಿ ನಗರದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಅನೇಕ ಕಡೆ ಹಾನಿ ಸಂಭವಿಸಿದ ಘಟನೆ ಜರುಗಿದೆ.ತಾಲೂಕಿನ ದಾಟನಾಳ ಗ್ರಾಮದಲ್ಲಿ ರೈತ ಶೇಕಪ್ಪ ಈರಪ್ಪ ಹೂಗಾರ ಎಂಬುವರ ಎಮ್ಮೆಗೆ ಸಿಡಿಲು ಬಡಿದು ಎಮ್ಮೆ ಸಾವನ್ನಪ್ಪಿದೆ.

ಸುಮಾರು 4 ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಈ ರೈತನಿಗೆ ಇದರಿಂದ ಆರ್ಥಿಕ ನಷ್ಟ ಉಂಟಾಗಿದೆ. ಸಿಡಿಲಿನ ಹೊಡೆತದಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಇನ್ನೊಂದೆಡೆ ಭೋಗಾನೂರ ಗ್ರಾಮದಲ್ಲಿ ಅತಿಯಾದ ಗಾಳಿ ಮತ್ತು ಮಳೆಯ ಪರಿಣಾಮವಾಗಿ ಮನೆಯ ಮೇಲೆ ಮರ ಬಿದ್ದಿದೆ. ಘಟನೆಯಲ್ಲಿ ಮನೆಯ ಒಂದು ಭಾಗಕ್ಕೆ ಹಾನಿಯಾಗಿದ್ದು, ಅದೃಷ್ಟವಶಾತ್ ಕುಟುಂಬದವರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಕುರಿತು ಪರಿಶೀಲನೆ ನಡೆಸಿ, ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

Edited By :
Kshetra Samachara

Kshetra Samachara

17/03/2026 09:10 pm

Cinque Terre

38.97 K

Cinque Terre

0

ಸಂಬಂಧಿತ ಸುದ್ದಿ