ಶಿವಮೊಗ್ಗ : ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆಗೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ, ಮೈದಾನ ಪ್ರದೇಶಕ್ಕೆ ಯಾವುದೇ ವಾಹನಗಳು ಪ್ರವೇಶಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತಡೆಹಿಡಿಯಲಾಗಿತ್ತು. ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಬಜರಂಗದಳದ ಕೆಲವು ಕಾರ್ಯಕರ್ತರು ಸ್ಥಳಕ್ಕಾಗಮಿಸಿ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.
ಘಟನೆಯ ತೀವ್ರತೆಯನ್ನು ಮನಗಂಡು, ಶಿವಮೊಗ್ಗ ರಕ್ಷಣಾಧಿಕಾರಿ ನಿಖಿಲ್ ಅವರು ಖುದ್ದಾಗಿ ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಸಮಾಲೋಚಿಸಿದರು. ಅವರು ಕಾರ್ಯಕರ್ತರಿಗೆ ಸಮಜಾಯಿಷಿ ನೀಡಿ, ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಯಂತ್ರಣಕ್ಕೆ ತಂದರು.
PublicNext
17/03/2026 09:48 pm
LOADING...