ಎವಿಯೇಷನ್, ಆತಿಥ್ಯ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುವ ಕನಸು ಹೊಂದಿರುವ ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿಶೇಷ ಮಾರ್ಗದರ್ಶಿ ಉಪನ್ಯಾಸ ಹಾಗೂ ನೋಂದಣಿ ಶಿಬಿರವನ್ನು ಆಯೋಜಿಸಲಾಗಿದೆ.
ರಾಜ್ಯದಲ್ಲಿ ಎವಿಯೇಷನ್ ಹಾಗೂ ಪ್ರವಾಸೋದ್ಯಮ ಶಿಕ್ಷಣ ಕ್ಷೇತ್ರದಲ್ಲಿ ಖ್ಯಾತಿ ಪಡೆದಿರುವ ವಿಜನ್ ಫ್ಲೈ ಸಂಸ್ಥೆ, ಪಬ್ಲಿಕ್ ನೆಕ್ಸ್ಟ್ ಸಹಯೋಗದಲ್ಲಿ ಈ ಮಾರ್ಗದರ್ಶಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಾರ್ಚ 18 ರಿಂದ ಎಪ್ರಿಲ್ 30ರವರೆಗೆ ರಾಜ್ಯದ ವಿವಿಧ ನಗರಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಈ ಉಪನ್ಯಾಸದಲ್ಲಿ ವಿಮಾನಯಾನ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ತಜ್ಞರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಅಪಾರ ಉದ್ಯೋಗ ಅವಕಾಶಗಳನ್ನು ಹೊಂದಿರುವ ಈ ಕ್ಷೇತ್ರಗಳ ಬಗ್ಗೆ ಸಂಪೂರ್ಣ ಮಾಹಿತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಲ್ಲಿ ಅಗತ್ಯ ಕೌಶಲ್ಯ ಇರುವವರನ್ನು ಆಯ್ಕೆ ಪ್ರಕ್ರಿಯೆ ಮೂಲಕ ಗುರುತಿಸಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಮ್ಮ ಪೋಷಕರ ಸಮ್ಮುಖದಲ್ಲಿ ಕೋರ್ಸ್‌ಗೆ ನೋಂದಣಿ ಮಾಡುವ ಅವಕಾಶವೂ ನೀಡಲಾಗುತ್ತದೆ.
ಕಲ್ಬುರ್ಗಿ, ಬೀದರ್, ವಿಜಯಪುರ, ಬಾಗಲಕೋಟೆ, ರಾಯಚೂರು, ಸಿಂಧನೂರು, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗದಗ್, ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ತುಮಕೂರು, ಚಿತ್ರದುರ್ಗ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚನ್ನಪಟ್ಟಣ, ರಾಮದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಶಿರಸಿ, ಉಡುಪಿ, ಮಂಗಳೂರು ಹಾಗೂ ಗಂಗಾವತಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಈ ಪ್ರದೇಶಗಳಲ್ಲಿ ಸೆಕೆಂಡ್ ಪಿಯುಸಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸಿದರೆ 9538879383 ಈ ಸಂಖ್ಯೆಗೆ ಸಂಪರ್ಕ ಮಾಡಿ ತಮ್ಮ ಸೀಟನ್ನು ಮುಂಗಡವಾಗಿ ನೋಂದಣಿ ಮಾಡಿಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/03/2026 07:51 am