ಗದಗ: ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಇಂದು ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ರೈತನೋರ್ವ ಸಾವನ್ನಪ್ಪಿದ್ದಾನೆ.ನಿಂಗಪ್ಪ ರಾಮಪ್ಪ ಅಮಾತಿ (58) ಮೃತ ರೈತ. ಸಾಯಂಕಾಲ ಹೊಲದಿಂದ ಬರುವಾಗ ಬೆನ್ನಿ ಹಳ್ಳದ ಹತ್ತಿರ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ರೈತನ ಸಾವಿನಿಂದಾಗಿ ಕುಟುಂಬ ಕಂಗಾಲಾಗಿದ್ದು, ಘಟನೆ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
18/03/2026 09:03 am
LOADING...