ಚಿಕ್ಕೋಡಿ:ರಾಜ್ಯಾದ್ಯಂತ ಇಂದು ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಹಾಜರಾಗಿದ್ದಾರೆ.ಬೆಳಿಗ್ಗೆ 9 ಗಂಟೆಗೆಲೇ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಶಾಲಾ ವಿದ್ಯಾರ್ಥಿಗಳು ಆಗಮಿಸಿ, ಪರೀಕ್ಷೆಗೆ ಸಜ್ಜಾಗಿರುವ ದೃಶ್ಯ ಕಂಡುಬಂದಿತು.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳ ಮುಂದೆ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳಲ್ಲಿ ತುಸು ಆತಂಕದ ಜೊತೆಗೆ ಆತ್ಮವಿಶ್ವಾಸವೂ ಕಂಡುಬಂದಿದ್ದು, ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಪರೀಕ್ಷಾ ಕೇಂದ್ರಗಳ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಸುಗಮವಾಗಿ ಪರೀಕ್ಷೆ ನಡೆಯಲು ಕ್ರಮ ಕೈಗೊಳ್ಳಲಾಗಿದೆ.
Kshetra Samachara
18/03/2026 09:24 am
LOADING...