ಹೊಸಪೇಟೆ: ರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗಳು ಆರಂಭಗೊಂಡಿದ್ದು, ವಿಜಯನಗರ ಜಿಲ್ಲೆಯಲ್ಲಿ ಒಟ್ಟು 73 ಕೇಂದ್ರಗಳಲ್ಲಿ 22,041 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ 16, ತಾಲೂಕು ಕೇಂದ್ರಗಳಲ್ಲಿ 15, ಹೋಬಳಿ ಮಟ್ಟದಲ್ಲಿ 14 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 28 ಸೇರಿದಂತೆ ಒಟ್ಟು 73 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಿಗೂ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ಕಣ್ಗಾವಲು ಇಡಲಾಗಿದೆ.
ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಮತ್ತು ಸೈಬರ್ ಸೆಂಟರ್‌ಗಳನ್ನು ಬಂದ್ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಅಧೀಕ್ಷಕರು ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸಲಾಗಿದ್ದು, ಅನಿವಾರ್ಯ ಸಂದರ್ಭಗಳಲ್ಲಿ ಕೇವಲ ಮೂಲಭೂತ (ಬೇಸಿಕ್) ಫೋನ್ ಬಳಸಲು ಮಾತ್ರ ಅವಕಾಶ ನೀಡಲಾಗಿದೆ. ಇದಲ್ಲದೆ, ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
PublicNext
18/03/2026 10:43 am
LOADING...