ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಿ - ಎಬಿವಿಪಿ

ಶಿರಹಟ್ಟಿ: ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2,81,881 ಹುದ್ದೆಗಳನ್ನು ಆದಷ್ಟು ಬೇಗನೆ ನೇಮಕಾತಿ ಮಾಡಿಕೊಳ್ಳಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಶಿರಹಟ್ಟಿ ಘಟಕದ ವತಿಯಿಂದ ರಸ್ತೆ ತಡೆದು ಪ್ರತಿಭಟನೆಯನ್ನು ನಡೆಸಿದರು.

ಹೌದು.... ಪಟ್ಟಣದ ಕೂಗಳತೆ ದೂರದಲ್ಲಿ ಇರುವ ಖಾನಾಪುರ ಕ್ರಾಸ್ ಬಳಿ ಮಂಗಳವಾರ ವಿದ್ಯಾರ್ಥಿಗಳು ರಸ್ತೆ ಬಂದ್ ಮಾಡಿ ಕೆಲ ಹೊತ್ತು ಪ್ರತಿಭಟನೆಯನ್ನು ನಡೆಸಿದರು.

ನಂತರ ತಹಶೀಲ್ದಾರ್ ಅವರು ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳಿಂದ ಮನವಿಯನ್ನು ಸ್ವೀಕರಿಸಿದರು.

ಪ್ರತಿಭಟನೆಯ ಮಧ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ನೀವು ಏನಾದರೂ ಮಾಡಿ ಸರ್ ನಾವು ಎಲ್ಲದಕ್ಕೂ ಸಿದ್ಧರಾಗಿ ಬಂದಿದ್ದೇವೆ ಎಂದು ಹೇಳಿದರು.

Edited By : Somashekar
PublicNext

PublicNext

18/03/2026 12:20 pm

Cinque Terre

12.53 K

Cinque Terre

0

ಸಂಬಂಧಿತ ಸುದ್ದಿ