ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ - ಚಿಕ್ಕೋಡಿ ಡಿಡಿಪಿಐ ಸೀತಾರಾಮು ಹೇಳಿಕೆ

ಚಿಕ್ಕೋಡಿ: ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೂ ಅಗತ್ಯ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಡಿಡಿಪಿಐ ಸೀತಾರಾಮು ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 131 ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಯಶಸ್ವಿಯಾಗಿ ರವಾನಿಸಲಾಗಿದೆ ಎಂದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಭಯ ನಿವಾರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೂ ಪರೀಕ್ಷೆ ಎದುರಿಸಲು ಧೈರ್ಯ ತುಂಬಲಾಗಿದೆ ಎಂದು ಹೇಳಿದರು.

ಇದಲ್ಲದೆ, ಶಿಕ್ಷಣ ಇಲಾಖೆಯ ಯಾವುದೇ ಕ್ರಮಗಳಲ್ಲಿ ಲೋಪಗಳಿಲ್ಲದೆ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಎಲ್ಲಾ ಪರೀಕ್ಷಾ ಕೊಠಡಿಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು.

ನಿನ್ನೆ ಸುರಿದ ಮಳೆಯ ಹಿನ್ನೆಲೆಯಲ್ಲಿಯೂ ಯಾವುದೇ ಶಾಲೆಗಳು ಅಥವಾ ಪರೀಕ್ಷಾ ಕೊಠಡಿಗಳಿಗೆ ಹಾನಿಯಾಗಿಲ್ಲ ಎಂದು ಅವರು ಭರವಸೆ ನೀಡಿದರು.

Edited By : PublicNext Desk
Kshetra Samachara

Kshetra Samachara

18/03/2026 01:01 pm

Cinque Terre

4.12 K

Cinque Terre

0

ಸಂಬಂಧಿತ ಸುದ್ದಿ