ಚಾಮರಾಜನಗರ : ಜಿಲ್ಲೆಯಲ್ಲಿ ಬುಧವಾರದಿಂದ ಆರಂಭಗೊಂಡಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು.
ಜಿಲ್ಲೆಯಲ್ಲಿ ಒಟ್ಟು 47 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಮೊದಲ ದಿನ ಪ್ರಥಮ ಭಾಷೆಗೆ ಜಿಲ್ಲೆಯಲ್ಲಿ ಒಟ್ಟು 11,027 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 10,911 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರೆ 116 ವಿದ್ಯಾರ್ಥಿಗಳು ಗೈರಾಗಿದ್ದರು.
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ಹುಡುಕಿ ನಂತರ ಕೊಠಡಿಗಳಿಗೆ ತೆರಳಿ ಪರೀಕ್ಷೆ ಬರೆದರು. ಪರೀಕ್ಷೆ ಹಿನ್ನೆಲೆಯಲ್ಲಿ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು.
ಗುಲಾಬಿ ಹೂವು, ಸಿಹಿ ವಿತರಿಸಿ ಸ್ವಾಗತ : ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜಿಲ್ಲೆಯ ವಿವಿಧೆಡೆ ಅಧಿಕಾರಿಗಳು, ಮುಖಂಡರು ಗುಲಾಬಿ ಹೂವು, ಪೆನ್ನು, ಸಿಹಿ ವಿತರಿಸಿ ಸ್ವಾಗತಿಸಿದರಲ್ಲದೇ ಪರೀಕ್ಷೆಗೆ ಶುಭಕೋರಿದರು.
Kshetra Samachara
18/03/2026 03:05 pm
LOADING...