ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಗ್ರಾಮೀಣ ಆರೋಗ್ಯ ಸೇವೆಗಳ ಬಲವರ್ಧನೆಗೆ ಶಾಸಕರ ಒತ್ತಾಯ

ಸಕಲೇಶಪುರ: ಮಲೆನಾಡು ಭಾಗದ ಗ್ರಾಮೀಣ ಜನರ ಆರೋಗ್ಯ ಸಮಸ್ಯೆಗಳ ಕುರಿತು ಗಂಭೀರ ಚಿಂತನೆ ವ್ಯಕ್ತಪಡಿಸಿದ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು, ಸದನದಲ್ಲಿ ಹಲವು ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಪ್ರತಿ 10,000 ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೀಮಿತಗೊಳಿಸುವ ಯೋಚನೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಮಲೆನಾಡು ಪ್ರದೇಶದ ಭೌಗೋಳಿಕ ವೈಶಿಷ್ಟ್ಯತೆಯನ್ನು ಪರಿಗಣಿಸದೇ ಇಂತಹ ನಿರ್ಧಾರ ಕೈಗೊಳ್ಳುವುದರಿಂದ ಗ್ರಾಮೀಣ ಜನರಿಗೆ ತೀವ್ರ ತೊಂದರೆ ಉಂಟಾಗುತ್ತದೆ ಎಂದು ಹೇಳಿದರು. “ಇಲ್ಲಿನ ಹಳ್ಳಿಗಳು ಒಂದರಿಂದ ಮತ್ತೊಂದು ಹಳ್ಳಿಗೆ ಹತ್ತರಿಂದ ಹದಿನೈದು ಕಿಲೋಮೀಟರ್ ದೂರದಲ್ಲಿವೆ. ಇಂತಹ ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಗಳನ್ನು ಕಡಿತಗೊಳಿಸುವುದು ಕಾರ್ಮಿಕ ವರ್ಗದ ಜನರಿಗೆ ದೊಡ್ಡ ಹೊರೆ ಆಗುತ್ತದೆ” ಎಂದು ಎಚ್ಚರಿಸಿದರು.

ಇದೇ ವೇಳೆ, ಹಗಲಿರುಳು ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ವಜಾ ಮಾಡುವ ಯೋಚನೆಯನ್ನು ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಅವರು ಆಗ್ರಹಿಸಿದರು. ಗ್ರಾಮೀಣ ಆರೋಗ್ಯ ವ್ಯವಸ್ಥೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಒತ್ತಿಹೇಳಿದರು.

ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ, ತುರ್ತು ಪರಿಸ್ಥಿತಿಯಲ್ಲಿ ಜನರ ಜೀವ ರಕ್ಷಣೆಗಾಗಿ ಪ್ರತಿ ಹೋಬಳಿಗೂ ಕನಿಷ್ಠ ಒಂದು ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದು ಅವಶ್ಯಕ ಎಂದು ಅವರು ಸೂಚಿಸಿದರು.

ಇದಲ್ಲದೆ, ಸಕಲೇಶಪುರದಲ್ಲಿ ತಾಯಿ ಮತ್ತು ಮಕ್ಕಳಿಗಾಗಿ ವಿಶೇಷ ಆಸ್ಪತ್ರೆ ಸ್ಥಾಪನೆ ಮಾಡುವುದರ ಜೊತೆಗೆ, ಖಾಲಿ ಇರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

Edited By :
PublicNext

PublicNext

18/03/2026 03:28 pm

Cinque Terre

11.28 K

Cinque Terre

0

ಸಂಬಂಧಿತ ಸುದ್ದಿ