ಬೆಂಗಳೂರು: ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಅಸಭ್ಯ ವರ್ತನೆಯ ಗಂಭೀರ ಆರೋಪಗಳು ಕೇಳಿಬಂದಿವೆ. ಕುಟುಂಬ ಸಮಸ್ಯೆಗಾಗಿ ಠಾಣೆಗೆ ಬಂದ ಮಹಿಳೆಯರೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾನೆ ಎಂದು ಸಂತ್ರಸ್ತೆಯರು ಆರೋಪಿಸಿದ್ದಾರೆ. ಈ ಹಿನ್ನೆಲೆ, ನ್ಯಾಯಕ್ಕಾಗಿ ಅವರು ರಾಜ್ಯ ಮಹಿಳಾ ಆಯೋಗವನ್ನು ಸಂಪರ್ಕಿಸಿದ್ದಾರೆ. ಮಹಿಳೆಯರು ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದು, ತಮ್ಮ ಅನುಭವಗಳನ್ನು ವಿವರವಾಗಿ ಹಂಚಿಕೊಂಡಿದ್ದಾರೆ. ನಾಗಲಕ್ಷ್ಮೀ ಚೌಧರಿ ಅವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ, ಸಂತ್ರಸ್ತೆಯರು ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿ ಘಟನೆ ಕುರಿತು ಹೆಚ್ಚಿನ ಮಾಹಿತಿ ನೀಡಿದ್ದಾರೆ, ಇದರಿಂದ ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ಸಿಕ್ಕಿದೆ.
PublicNext
18/03/2026 03:34 pm
LOADING...