ಚಿಕ್ಕಮಗಳೂರು: ಹಿಂದೂ ಮತ್ತು ಮುಸ್ಲಿಂ ಮುಖಂಡರು ಸೇರಿದಂತೆ ಒಟ್ಟು ಆರು ಜನರನ್ನು ಗಡಿಪಾರು ಮಾಡಲು ಜಿಲ್ಲಾ ಪೊಲೀಸ್ ಇಲಾಖೆಯು ಉಪವಿಭಾಗಾಧಿಕಾರಿಗಳಿಗೆ (ಎಸಿ) ಶಿಫಾರಸ್ಸು ಮಾಡಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮತ್ತು ಬಜರಂಗದಳದ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಅವರ ಹೆಸರುಗಳಿದ್ದು, ಇವರೊಂದಿಗೆ ಜೋಹರ್, ಚಾಂದ್, ಇಬ್ರಾಹಿಂ ಹಾಗೂ ಇಮ್ರಾನ್ ಎಂಬುವವರಿಗೂ ನೋಟಿಸ್ ನೀಡಲು ಸೂಚಿಸಲಾಗಿದೆ.
ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಳೆಯ ಪ್ರಕರಣಗಳನ್ನು ಉಲ್ಲೇಖಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಮುಖವಾಗಿ ಸಂತೋಷ್ ಅವರ ವಿರುದ್ಧ ಇರುವ 14 ಪ್ರಕರಣಗಳ ಹಿನ್ನೆಲೆಯಲ್ಲಿ ಈ ಶಿಫಾರಸ್ಸು ಪತ್ರ ರವಾನೆಯಾಗಿದೆ. ಜಿಲ್ಲಾ ಪೊಲೀಸ್ ಇಲಾಖೆಯ ಈ ಪ್ರಸ್ತಾವನೆಯನ್ನು ಪರಿಶೀಲಿಸಲಿರುವ ಚಿಕ್ಕಮಗಳೂರು ಉಪವಿಭಾಗಾಧಿಕಾರಿಗಳು, ಆರು ಜನರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಿದ ಬಳಿಕ ಅಂತಿಮ ಆದೇಶ ಹೊರಡಿಸಲಿದ್ದಾರೆ. ಆದರೆ ಯುಗಾದಿ ಹಬ್ಬದ ಸನಿಹದಲ್ಲಿಯೇ ಇಂತಹ ಗಡಿಪಾರು ಪ್ರಕ್ರಿಯೆಗೆ ಮುಂದಾಗಿರುವುದು ಹಿಂದೂ ಮುಖಂಡರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
PublicNext
18/03/2026 05:49 pm
LOADING...