ಮಡಿಕೇರಿ :ಗ್ರಾಹಕರು ಮೋಸ, ವಂಚನೆಗೆ ಒಳಗಾಗುವುದು ತಪ್ಪಿಸುವಲ್ಲಿ ರಾಜ್ಯಾದ್ಯಂತ ಗ್ರಾಹಕರ ಕಾಯ್ದೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿದ್ದು, ವಂಚನೆಗೆ ಅಥವಾ ಮೋಸಕ್ಕೆ ತುತ್ತಾದರೆ, ಪರಿಹಾರ ಒದಗಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಕ್ರಮವಹಿಸಲಿದೆ ಎಂದು ಗ್ರಾಹಕರ ವ್ಯಾಜ್ಯಗಳ ಪರಿಹಾರ ರಾಜ್ಯ ಆಯೋಗದ ಅಧ್ಯಕ್ಷರು ಹೇಳಿದರು.
ಗ್ರಾಹಕರಿಗೆ ಸರಿಯಾದ ಸೇವೆ ಒದಗಿಸಬೇಕು ಎಂಬುದು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಕಚೇರಿಗೆ ಬೇಕಾದ ಎಲ್ಲಾ ರೀತಿಯ ಮೂಲ ಸೌಲಭ್ಯವನ್ನು ಕಲ್ಪಿಸಲು ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮುಂದಾಗಿದೆ ಎಂದು ಟಿ.ಜಿ.ಶಿವಶಂಕರೇಗೌಡ ಅವರು ವಿವರಿಸಿದರು.
ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಕೆಯಾಗುವ ಪ್ರಕರಣಗಳನ್ನು 90 ದಿನಗಳಲ್ಲಿ ವಿಲೇವಾರಿ ಮಾಡಲು ಆಯೋಗ ಶ್ರಮಿಸುತ್ತಿದೆ. ಗ್ರಾಹಕರ ವ್ಯಾಜ್ಯಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ತೀರ್ಪು ನೀಡಲು ಆಯೊಗ ಕ್ರಮವಹಿಸಿದೆ ಎಂದು ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರು ನುಡಿದರು.
Kshetra Samachara
18/03/2026 05:53 pm
LOADING...