ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಸರ್ಕಾರಿ ಖಾಲಿ ಹುದ್ದೆಗಳ ಭರ್ತಿಗಾಗಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಕುಂದಗೋಳ : ಸರ್ಕಾರಿ ಖಾಲಿ ಹುದ್ದೆಗಳ ಭರ್ತಿಗಾಗಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಕುಂದಗೋಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಘಟಕದ ವತಿಯಿಂದ ರಾಜ್ಯದಲ್ಲಿ ಅವ್ಯವಸ್ಥೆ ತಾಳಿರುವ ಶೈಕ್ಷಣಿಕ ವ್ಯವಸ್ಥೆ ಹಾಗೂ ನಿರುದ್ಯೋಗ ಸಮಸ್ಯೆ ನಿವಾರಿಸಿ, ಅತಿ ಶೀಘ್ರವಾಗಿ ಸರ್ಕಾರಿ ಇಲಾಖೆ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗೆ ಒತ್ತಾಯಿಸಿ ಕುಂದಗೋಳದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಸರ್ಕಾರಿ ಪದವಿ ಕಾಲೇಜ್ ವಿದ್ಯಾರ್ಥಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳು ವಿದ್ಯಾರ್ಥಿಗಳು ಎಬಿವಿಪಿ ಪರಿಷತ್ತಿನ ವಿದ್ಯಾರ್ಥಿಗಳು ಕುಂದಗೋಳ ನಗರ ಕಾರ್ಯದರ್ಶಿಯಾದ ಶಿವಕುಮಾರ ಮಠಪತಿ ಸಹ ಕಾರ್ಯದರ್ಶಿಯಾದ ಕಿರಣ ಮೋರೆ, ವಿಕಾಸ ಘೋರ್ಪಡೆ ನೇತೃತ್ವದಲ್ಲಿ ಪ್ರತಿಭಟನೆ ಪಾದಯಾತ್ರೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಶಿರಸ್ತೇದಾರ್ ರೇಣುಕಾ ದಾನನ್ನವರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ. ನವೀನ್, ಕಾರ್ತಿಕ್, ಬಸವರಾಜ್, ಮುತ್ತು, ವಿಜಯ, ಪ್ರಶಾಂತ್, ಸುಹಾಸ, ಸುನೀತಾ, ಹಂಪಾ, ಪವಿತ್ರ, ಜ್ಯೋತಿ, ಸಾನಿಯಾ, ಆರ್ತಿ ವಿದ್ಯಾರ್ಥಿಗಳ ಮುಖಂಡರು ಎಲ್ಲಾ ವಿದ್ಯಾರ್ಥಿ-ವಿಧ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪ್ರತಿಭಟನೆ ಕುಂದಗೋಳದ ಕನಕದಾಸ ವೃತ್ತದಿಂದ ಆರಂಭಗೊಂಡು ಮಾರ್ಕೇಟ ರಸ್ತೆ ‌ಮೂಲಕ ತಹಶೀಲ್ದಾರ ಕಚೇರಿಗೆ ತಲುಪಿ ನಂತರ ತಹಶೀಲ್ದಾರ ಅನುಪಸ್ಥಿತಿಯಲ್ಲಿ ಶಿರಸ್ತೇದಾರರಾದ ಮಹೇಶ ಶಾನಬಾಳ ಹಾಗೂ ರೇಣುಕಾ ದಾನಣ್ಣವರ ಅವರಿಗೆ ಮನವಿ ಸಲ್ಲಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ರವಾನಿಸುವ ಭರವಸೆಯನ್ನು ನೀಡಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/03/2026 06:44 pm

Cinque Terre

40.07 K

Cinque Terre

0

ಸಂಬಂಧಿತ ಸುದ್ದಿ