ಬಳ್ಳಾರಿ: ದೇಶದಲ್ಲಿ ಈಗಾಗಲೇ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆಯೇ ಸಿಲಿಂಡರ್ ದರ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬಳ್ಳಾರಿಯಲ್ಲಿ ಬುದುವಾರ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಲಿಂಡರ್ ದರ ಹೆಚ್ಚಳವನ್ನು ಖಂಡಿಸಿ ನಗರದ ರಾಯಲ್ ವೃತ್ತದಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮಾಡಿದರು.
ಕಟ್ಟಿಗೆ ಬಳಸಿ ಒಲೆಯ ಮೇಲೆ ಟೀ ತಯಾರಿಸಿ ಸರ್ಕಾರದ ವಿರುದ್ಧ ವ್ಯಂಗ್ಯ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅದೇ ಟೀಯನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆಯನ್ನು ನಿವಾರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಸರ್ಕಾರದ ನಿಲುವಿನಿಂದ ಸಾಮಾನ್ಯ ಜನರು ಪರದಾಡುವಂತಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ಆರೋಪಿಸಿದರು. ಪ್ರತಿಭಟನೆಯ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
PublicNext
18/03/2026 07:07 pm
LOADING...